
ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಸುಂದರ್‌ಬಾನಿ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರತೀಯ ಸೇನೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಶಂಕಿತ ಭಯೋತ್ಪಾದಕರು ಭಾರತೀಯ ಸೈನಿಕರ ವಾಹನವನ್ನು ಗುರಿಯಾಗಿಸಿ ದಟ್ಟ ಅರಣ್ಯ ಪ್ರದೇಶದಿಂದ ಹಲವು ಸುತ್ತು ಗುಂಡು ಹಾರಿಸಿದ್ದಾರೆ.
ಸದ್ಯ ಇಡೀ ಪ್ರದೇಶವನ್ನು ಭಾರತೀಯ ಭದ್ರತಾ ಪಡೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಈ ದಾಳಿ ರಜೌರಿಯ ಸುಂದರಬನಿ ಪ್ರದೇಶದಲ್ಲಿ ನಡೆದಿದ್ದು, ಸುಂದರ್‌ಬನಿಯ ಹಳ್ಳಿಯೊಂದರಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಉಗ್ರರು ಭಾರತೀಯ ಸೇನಾ ವಾಹನವನ್ನು ಗುರಿ ಮಾಡಿ ಗುಂಡು ಹಾರಿಸಿದ್ದಾರೆ,
ಆರಂಭಿಕ ವರದಿಗಳ ಪ್ರಕಾರ, ಭಯೋತ್ಪಾದಕರು ಸೇನಾ ವಾಹನದ ಮೇಲೆ ಒಂದರಿಂದ ಎರಡು ಸುತ್ತು ಗುಂಡು ಹಾರಿಸಿದ್ದಾರೆ.
ದಾಳಿ ನಡೆದ ಸಮಯದಲ್ಲಿ ಸೇನಾ ವಾಹನವು ಗಸ್ತು ತಿರುಗುತ್ತಿತ್ತು. ಈ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ.
