ಸಕಲೇಶಪುರ : ಅನೆಮಹಲ್ ನ ದುರ್ಗಾ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ಸಕಲೇಶಪುರದಲ್ಲಿ ನೂತನವಾಗಿ ಸಂಸ್ಥಾಪನೆಯಾಗಿರುವ ನಾಡಪ್ರಭು ಕೆಂಪೇಗೌಡ ಸಮಿತಿಯ ವತಿಯಿಂದ ಒಕ್ಕಲಿಗರ ಸಮುದಾಯದ ಬಂಧುಗಳು ಸಭೆ ಸೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಸೇವಕರಾದ ಬಾಚಿಹಳ್ಳಿ ಪ್ರತಾಪ್ ಗೌಡರು ಬರುವ ಮೇ ತಿಂಗಳಿನಲ್ಲಿ ಜರುಗಲಿರುವ ಕಾರ್ಯಕ್ರಮವು ಯಾವ ಸಂಘ ಅಥವಾ ಸಮುದಾಯವನ್ನು ಗುರಿಯಾಗಿಸಿ ಮಾಡುವ ಕಾರ್ಯಕ್ರಮವಲ್ಲ, ಯಾವ ವ್ಯಕ್ತಿಗೂ ತೆಜೋವಧೆ ಮಾಡುವ ಉದ್ದೇಶದಿಂದ ಮಾಡುವ ಕಾರ್ಯಕ್ರಮವಲ್ಲ, ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಜಾತ್ಯತೀತ ವಾಗಿ ಪಕ್ಷಾತೀತವಾಗಿ ಗೌರವ ಸಮರ್ಪಿಸುವ ಕಾರ್ಯಕ್ರಮ ಮತ್ತು ಶೈಕ್ಷಣಿಕ , ಸಾಮಾಜಿಕ, ಕಲೆ, ಕ್ರೀಡೆಯಲ್ಲಿ ಸಾಧನೆ ಮಾಡಿರುವ ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಮತ್ತು ಸೈನ್ಯದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸನ್ಮಾನ ಮಾಡುವ ಒಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮುದಾಯ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದು , ನಾನು ಸಮುದಾಯ ಒಡೆಯುವುಂತಹ ಕೆಲಸ ಮಾಡುವವನಲ್ಲ ಬದಲಿಗೆ ಸಮುದಾಯದ ಅಭಿವೃದ್ದಿ ಹಾಗೂ ಸಮುದಾಯವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ಸಮುದಾಯ ಒಡೆದಾ ಎಂಬ ಹಣೆಪಟ್ಟಿ ನೀಡುವುದಾದರೆ ನನಗೆ ಯಾವ ಕಾರ್ಯಕ್ರಮದ ಆವಶ್ಯಕತೆ ಇಲ್ಲ ಎಂದು ಹೇಳಿದರು.

ಕಾರ್ಯಕ್ರಮ ದಲ್ಲಿ ನೂತನ ಸಂಘಟನೆಯಾದ ನಾಡಪ್ರಭು ಕೆಂಪೇಗೌಡ ಸಮಿತಿಯ ಅಧ್ಯಕ್ಷರಾದ ಶ್ರೀ ಹುರುಡಿ ವಿಕ್ರಂಗೌಡ , ಉಪಾಧ್ಯಕ್ಷರುಗಳು ಕಾರ್ಯದರ್ಶಿಗಳು ಹಾಗೂ ನಿರ್ದೇಶಕರುಗಳು ಹಾಜರಿದ್ದು, ಕಾರ್ಯಕ್ರಮದಲ್ಲಿ ಸುಮಾರು 500 ಸದಸ್ಯರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *