ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ವಿಚಾರಣೆ ನಡೆಸಿದ ಹೈಕೋರ್ಟ್​, ಇದೀಗ ಬಿಜೆಪಿ ಹಿರಿಯ ನಾಯಕರಿಗೆ ಮಧ್ಯಂತರ ರಿಲೀಫ್ ನೀಡಿದೆ.

ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದ್ದು, ಈ ಮೂಲಕ ಬಿಎಸ್ ವೈಗೆ ರಿಲೀಫ್ ಸಿಕ್ಕಿದೆ.ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು.

ಕಾಗ್ನಿಜೆನ್ಸ್, ಸಮನ್ಸ್​ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್​, ಬಿಎಸ್​ವೈ ಖುದ್ದು ಹಾಜರಾತಿಗೂ ವಿನಾಯಿತಿ ಕೊಟ್ಟಿದೆ. ಬಿಎಸ್​ವೈ ಅರ್ಜಿ ಬಗ್ಗೆ ಇನ್ನೂ ಹೆಚ್ಚಿನ ಹಾಗೂ ವಿವರವಾದ ವಿಚಾರಣೆ ಆಗತ್ಯವಿದೆ ಎಂದು ಕೋರ್ಟ್​ ತಿಳಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್.​ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಫೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು. ಈ ಹಿಂದೆ ಪ್ರಕರಣ ರದ್ದು ಕೋರಿ ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ರದ್ದುಗೊಳಿಸಿತ್ತು.

(ಶುಕ್ರವಾರ) ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಇದೀಗ ಮಾಜಿ ಸಿಎಂಗೆ ಮಧ್ಯಂತರ ರಿಲೀಫ್ ನೀಡಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *