
ಸಕಲೇಶಪುರ : ಇಂದು ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು..
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪ್ರಕಾಶ್ ಮಾತಾನಾಡಿ ನನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಿದ ಸದಸ್ಯರುಗಳಿಗೆ ಅಭಿನಂದನೆ ತಿಳಿಸಿದರು..
ಚುನಾವಣಾ ಪ್ರಕ್ರಿಯೆಯನ್ನು ತಹಸೀಲ್ದಾರ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆ ಆಗಿರುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷ ಪ್ರಕಾಶ್ ಮಾತಾನಾಡಿ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ಸಹಕರಿಸಿದ್ದಾರೆ ಈ ಸಂದರ್ಭದಲ್ಲಿ ನನ್ನನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲಾ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತ ಇಂದು ನನ್ನನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಮುಖಂಡರಿಗೂ ಹಾಗೂ ಹಿರಿಯರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿ ಪಂಚಾಯಿತಿ ಈ ಹಿಂದೆ ಇದ್ದ ಅಧ್ಯಕ್ಷರಿಗೆ ಹೇಗೆ ಸಹಕಾರ ನೀಡಿದ್ದಿರೂ ನನಗು ಕೂಡ ನಿಮ್ಮೆಲ್ಲರ ಸಹಕಾರ ನೀಡಿ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಿ ಪಂಚಾಯಿತಿ ವ್ಯಾಪ್ತಿಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಲ್ಲಿ ಕಾರ್ಯನಿರ್ವಹಿಸುತ್ತೇನೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪಕ್ಷ ಬೇದ ಮಾಡದೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ನೂತನ ಉಪಾಧ್ಯಕ್ಷೆ ಶಶಿಕಲಾ ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು ಎಲ್ಲ ಸದಸ್ಯರ ಸಹಕಾರ ಪಡೆದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ.ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿ ರಸ್ತೆ, ನೀರು ಬೀದಿದೀಪ, ಚರಂಡಿಗಳಿಗೆ ಮೊದಲ ಆಧ್ಯತೆ ನೀಡಿಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ. ಹಾಗೂ ಈಚುನಾವಣೆಯಲ್ಲಿಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಸದಸ್ಯರುಗಳಿಗೆ ಅಭಿನಂಧನೆ ಸಲ್ಲಿಸಿದರು.
ಬಿಜೆಪಿ ಯುವ ಮುಖಂಡ ಕಟ್ಟೆಗದ್ದೆ ನಾಗರಾಜ್ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತೆ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಜಕುಮಾರ್, ಲೋಹಿತ್, ಪೃಥ್ವಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು,




