
ಹಾಸನ : ದಿನಾಂಕ 24-3-2025 ರಂದು ಸಂಜೆ ಹಾಸನ ಶ್ರೀ ಬಸವೇಶ್ವರ ಕಲ್ಯಾಣ ಮಂಠಪದ ಶ್ರೀ ಬಸವೇಶ್ವರ ದೇವಾಲಯದಲ್ಲಿ ನಡೆದ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ತಾಲ್ಲೂಕು ಮಹಿಳಾ ಘಟಕದ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಅಯ್ಕೆ ಸಭೆಯಲ್ಲಿ ಸರ್ವನುಮತವಾಗಿ ಮಮತಾ ಪಾಟೀಲ್ ರವರನ್ನು ಆಧ್ಯಕ್ಷರಾಗಿ ಅಯ್ಕೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್ ಸರ್ವರ ಅಭಿಪ್ರಾಯದಂತೆ ಮಮತಾ ಪಾಟೀಲರನ್ನು ಅಧ್ಯಕ್ಷರಾಗಿ ಘೋಷಣೆ ಮಾಡಿದರು.
