ಆಲೂರು :ಶ್ರೀ ಬಿಂದಿಗೆಮ್ಮ ಮತ್ತು ರಂಗನಾಥಸ್ವಾಮಿಯವರ ಜಾತ್ರ ಮಹೋತ್ಸವ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಬಿಂದಿಗೆಮ್ಮ ಮತ್ತು ಶ್ರೀ ರಂಗನಾಥಸ್ವಾಮಿ ಜಾತ್ರೆಯ ಅಂಗವಾಗಿ ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಎಂ ಪಟೇಲ್ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತಾನಾಡಿದವರು ಮೂರು ವರ್ಷಕ್ಕೊಮ್ಮೆ ಗ್ರಾಮದಲ್ಲಿ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಭಕ್ತರ ಸೇವೆಯು ಹೆಚ್ಚು ಹೆಸರುವಾಸಿ ಪಡೆದಿದ್ದು, ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ದಿನನಿತ್ಯ ಪೂಜೆ ಪುನಸ್ಕಾರಗಳಲ್ಲಿ ಭಕ್ತರು ತೊಡಗಿದ್ದು ದೇವರ ಕೃಪೆಗೆ ಪಾತ್ರರಾಗಿದ್ದಾರೆ ಮತ್ತು ದೇವಸ್ಥಾನಕ್ಕೆ ಹಲವು ಮೂಲಭೂತ ಸೌಕರ್ಯಗಳ ಕೊರತೆಇದ್ದು ಗ್ರಾಮಸ್ಥರು ನನ್ನ ಗಮನಕ್ಕೆ ತಂದಿದ್ದಾರೆ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರದ ವತಿಯಿಂದ ಮುಖ್ಯಮಂತ್ರಿಗಳ ನಿಧಿಯಲ್ಲಿ ಅನುದಾನ ತಂದು ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು..

ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಮಾತಾನಾಡಿ ಪುರಾತನ ಕಾಲದ ಇತಿಹಾಸವುಳ್ಳ ಜಾತ್ರಾ ಮಹೋತ್ಸವವು 28 ಹಳ್ಳಿಗಳ ಜನರು ಸೇರಿ ನಡೆದುಕೊಂಡು ಬರುತ್ತಿರುವುದು ಸಂತಸದ ವಿಷಯವಾಗಿದೆ ಈ ಪುಣ್ಯ ಸ್ಥಳವು ಅನೇಕ ಪ್ರತಿಥಿಗಳನ್ನು ಹೊಂದಿದ್ದು ಸಾವಿರಾರು ಭಕ್ತರನ್ನು ಹೊಂದಿದೆ ಈ ಭಾಗದ ಜನರ ರೈತರಿಗೆ ಆರೋಗ್ಯ ಐಶ್ವರ್ಯ ಆಯಸ್ಸನ್ನುಕೊಟ್ಟು ಮಳೆ ಬೆಳೆ ಚೆನ್ನಾಗಿ ಆಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು..

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ತಅಧ್ಯಕ್ಷ ಪೃಥ್ವಿ ಜಯರಾಮ್ ಕಾಂಗ್ರೆಸ್ ಮುಖಂಡ ಕೃಷ್ಣೆಗೌಡ, ಪ್ರಭು ಹಾಗೂ ಭಕ್ತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *