ಚನ್ನರಾಯಪಟ್ಟಣ : ತಾಲ್ಲೂಕು ಡಿ. ಕಾಳೇನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವತಿಯಿಂದ ಈ ದಿನ ಮಾಸಿಕ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು,

ಮಹಿಳಾ ಸಬಲೀಕರಣದ ದೃಷ್ಟಿಯಿಂದ ಮಹಿಳೆಯರು ಮನೆಯಲ್ಲಿಯೇ ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಮೂಲಕ ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಅವರುಗಳಿಗೆ ಮಾರುಕಟ್ಟೆಯನ್ನು ಒದಗಿಸಿಕೊಟ್ಟು, ಇನ್ನು ಹೆಚ್ಚು ಉತ್ಪನ್ನಗಳನ್ನು ಉತ್ಪಾದಿಸಲು ಪ್ರೇರೇಪಿಸುವುದು, ಮಾಸಿಕ ಸಂತೆಯ ಉದ್ದೇಶವಾಗಿದೆ .

ಈ ಮಾಸಿಕ ಸಂತೆಗೆ ಜಿಲ್ಲಾ ಪಂಚಾಯಿತಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ವಿಜಯ್ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ಸಂಸ್ಥೆ ಯ ಪವನ್ ಕುಮಾರ್ ತಾಲ್ಲೂಕಿನ ತಾಲ್ಲೂಕು ಕಾರ್ಯ ಕ್ರಮ ವ್ಯವಸ್ಥಾಪಕರು ಪುಣ್ಯ,ತಾಲ್ಲೂಕು ವ್ಯವಸ್ಥಾಪಕರು ಸಿಂಪನ ,ಎನ್ ಆರ್ ಎಲ್ ಎಮ್ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ವಿವಿಧ ಪಂಚಾಯಿತಿಗಳ ಎಂ.ಬಿ.ಕೆ ಎಲ್.ಸಿ.ಆರ್.ಪಿ,ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಾಸಿಕ ಸಂತೆಯನ್ನು ಯಶಸ್ವಿಗೊಳಿಸಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *