
ಚಿಕ್ಕಮಗಳೂರು-ಬೇಲೂರು-ಹಾಸನ ರೈಲು ಮಾರ್ಗದ ಕಾಮಗಾರಿ ಚುರುಕು ಕಂಡಿದ್ದು ಈಗಾಗಲೇ ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ 9 ಕಿ.ಮೀ. ಮಾರ್ಗದಲ್ಲಿ ರೈಲಿನ ಪ್ರಾಯೋಗಿಕ ಮತ್ತು ವೇಗದ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಮಲೆನಾಡಿನ ಮತ್ತು ಅರೆ ಮಲೆನಾಡಿನ ಜನರ ಬಹುದಿನದ ಬೇಡಿಕೆ ಈಡೇರಿತ್ತಿರುವುದರಿಂದ ಅ ಭಾಗದ ಜನ ಸಂತಸಗೊಂಡಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ತಲಾ ಶೇ 50ರ ವೆಚ್ಚ ಹಂಚಿಕೆ ಪಾಲುದಾರಿಕೆಯಲ್ಲಿ ಈ ಯೋಜನೆಯನ್ನು ಕೈಗೊಂಡಿವೆ. ನೈಋತ್ಯ ರೈಲ್ವೆ ವಿಭಾಗದ ಮೈಸೂರು ವಲಯಕ್ಕೆ ಈ ಮಾರ್ಗ ಸೇರುತ್ತದೆ. ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ ರೈಲ್ವೆ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಮಾರ್ಗ ಚಿಕ್ಕಮಗಳೂರು-ಬೇಲೂರು ಹೊಸ ಬ್ರಾಡ್ ಗೇಜ್ ರೈಲು ಮಾರ್ಗದಲ್ಲಿ ಬರುತ್ತದೆ.
ಪ್ರಾದೇಶಿಕ ಸಾರಿಗೆ ಸಂಪರ್ಕಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಚಿಕ್ಕಮಗಳೂರು-ಹಾಸನ ನಡುವೆ 54 ಕಿಲೋ ಮೀಟರ್ ಉದ್ದದ ರೈಲು ಮಾರ್ಗ ನಿರ್ಮಾಣದ ಯೋಜನೆಯಾಗಿದ್ದು, ಹಾಸನ ಮತ್ತು ಚಿಕ್ಕಮಗಳೂರು ನಡುವಿನ ನೇರ ರೈಲು ಮಾರ್ಗ ನಿರ್ಮಾಣ ಯೋಜನೆಯ ಮೊದಲ ಹಂತದ ಸಿವಿಲ್ ಕಾಮಗಾರಿ ಪ್ರಾರಂಭವಾಗಿದೆ. ಮತ್ತು ಈ ಯೋಜನೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ತಲಾ ಶೇ 50ರಷ್ಟು ಪಾಲುದಾರಿಕೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಮೊದಲ ಹಂತದಲ್ಲಿ ಚಿಕ್ಕಮಗಳೂರು ಹಾದಿಹಳ್ಳಿ ನಡುವಿನ 9 ಕಿಲೋ ಮೀಟರ್ ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಜಿಲ್ಲಾಡಳಿತ ಅಷ್ಟೂ ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ ಕಾರಣ ಚುರುಕಾಗಿ ಸಿವಿಲ್ ಕಾಮಗಾರಿಯನ್ನು ಮುಗಿಸಿ ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ ರೈಲು ಪರೀಕ್ಷೆಯನ್ನು ಯಶಸ್ವಿಯಾಗಿ ಇಲಾಖೆ ಮಾಡಿದೆ ಇನ್ನೂ ಹಾದಿಹಳ್ಳಿ-ಬೇಲೂರು ನಡುವಿನ 13 ಕಿಲೋ ಮೀಟರ್ ಮಾರ್ಗಕ್ಕೆ ಶೇ 90 ರಷ್ಟು ಜಾಗ ರೈಲ್ವೆ ಇಲಾಖೆಗೆ ಹಸ್ತಾಂತರ ಆಗಿದ್ದು ಕಾಮಗಾರಿ ಚುರುಕಾಗಿ ಆಗುತ್ತಿರುವ ಕಾರಣ ಬೇಲೂರಿನ ಜನರ ದಶಕಗಳ ಕನಸು ನನಸಾಗುತ್ತಿರುವುದಕ್ಕೆ ಹರ್ಷವ್ಯಕ್ತಪಡಿಸಿದ್ದಾರೆ.