
ಸಕಲೇಶಪುರ : ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ವಿರೋದಿಸಿ ಯೂತ್ ಕಾಂಗ್ರೇಸ್ ವತಿಯಿಂದ ಇಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ನರೇಂದ್ರ ಮೋದಿಯವರ ನೇತೃದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆ ಹಿಚ್ಚಾಗಿದ್ದು ಇದನ್ನು ಮುಚ್ಚಿ ಹಾಕಲು ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ದೂರಿದರು .
ಪಟ್ಟಣದ ಹೇಮಾವತಿ ಸೇತುವೆಯಿಂದ ಮೆರವಣಿಗೆ ಹೊರಟ ಯೂತ್ ಕಾಂಗ್ರೇಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ದ ಎಸಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಯೂತ್ ಕಾಂಗ್ರೇಸ್ ಅದ್ಯಕ್ಷ ರಂಜೀತ್, ತಾಲೂಕು ಯೂತ್ ಕಾಂಗ್ರೇಸ್ ಅದ್ಯಕ್ಷ ದರ್ಮ ಹೆನ್ನಲಿ ಇತರರು ಇದ್ದರು.
