
ಸಕಲೇಶಪುರ : ಪಟ್ಟಣದ ಹಳೆ ಬಸ್ ನಿಲ್ದಾಣದ ಹತ್ತಿರ ಯುವ ಕಾಂಗ್ರೆಸ್ ಸಮ್ಮುಖದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಬಿಕಾರ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದವರಿಗೆ ಮೇಣದಬತ್ತಿ ಹಚ್ಚಿ ಗೌರವ ಮತ್ತು ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು
ಕ್ರೂರ ಕೃತ್ಯ ನಡೆಸಿದ ಭಯೋತ್ಪಾದಕರ ಫೋಟೋವನ್ನು ಸುಟ್ಟುಹಾಕುವ ಮೂಲಕ ಪ್ರತಿಭಟನೆ ಮಾಡಲಾಯಿತು,
ಈ ಸಂದರ್ಭದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮ ಹೆನ್ನಲಿ, ಸಕಲೇಶಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಬೀರ್ , ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಬೈಕೇರೆ , ಕಾರ್ತಿಕ್ ಸ್ವಾಮಿ , ಧರ್ಮ ಗ್ಯಾರೇಜ್, ನವೀನ್, ಉಮೇಶ್,ಅಶೋಕ್ ಬೈಕೆರೆ, ಸಾಗರ್ ಹೆನ್ನಲಿ, ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು,


