
ಸಕಲೇಶಪುರ :- ಸನಾತನ ಸೇವಾ ಟ್ರಸ್ಟ್ ವತಿಯಿಂದ ಕಾಶ್ಮೀರ ಪಹಲ್ಗಾಮ್ ದಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 26ಜನ ಸಹೋದರರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಗಡಿಭಾಗದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ನಮ್ಮ ವೀರ ಯೋಧರು ಸುರಾಕ್ಷಿತವಾಗಿದ್ದು ಉಗ್ರರನ್ನು ಸದೇ ಬಡಿದು ಜಯ ಶೀಲರಾಗಲು ಅವರಿಗೆ ಶಕ್ತಿ ನೀಡಲಿ ಎಂದು ಸಕಲೇಶಪುರ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು,
ನಂತರ ದೇವಸ್ಥಾನ ಮುಂಭಾಗದ ರಸ್ತೆಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ನಾಗರೀಕರಿಗೆ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು
ಈ ಸಂದರ್ಭದಲ್ಲಿ ಸನಾತನ ಸೇವಾ ಟ್ರಸ್ಟ್ ನ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು , ರಾಷ್ಟ್ರೀಯ ಸ್ವಯಂಸೇವಕ ಸಂಘದ ತಾಲೂಕು ಮುಖ್ಯಸ್ಥರು, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು, ಕೃಷಿಕ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಮೂಲ ನಿವಾಸಿ ವೇದಿಕೆ ಪದಾಧಿಕಾರಿಗಳು, ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.



