ಬಿಜೆಪಿಯಿಂದ ಉಚ್ಛಾಟಿತರಾಗಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್, ಬಸವನ ಬಾಗೇವಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.

ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಸವಾಲನ್ನು ಸ್ವೀಕರಿಸಿ ಶಿವಾನಂದ ಪಾಟೀಲ್​ ಅವರು ಶಾಸಕ ಸ್ಥಾನಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

“ಬಸನಗೌಡ ಪಾಟೀಲ್ ಯತ್ನಾಳ್‌ ಸಹ ಸವಾಲು ಸ್ವೀಕರಿಸಿ ರಾಜೀನಾಮೆ ಸಲ್ಲಿಸಿದರೆ ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸಿ” ಎಂದು ಸಭಾಧ್ಯಕ್ಷರಿಗೆ ಕೋರಿದ್ದಾರೆ. ಯತ್ನಾಳ್‌ ಏನು ಮಾಡುತ್ತಾರೆ ನೋಡಬೇಕು” ಎಂದು ಸಚಿವ ಶಿವಾನಂದ ಪಾಟೀಲ್‌ ಅವರ ಆಪ್ತ ಸಹಾಯಕ ಶಂಕರಗೌಡ ಬಿರಾದಾರ್‌ ತಿಳಿಸಿದ್ದಾರೆ ಎಂದು ‘ಈದಿನ. ಕಾಮ್‌’ಗೆ ವರದಿ ಮಾಡಿದೆ.

ಎರಡು ದಿನಗಳ ಹಿಂದೆ ಶಿವಾನಂದ ಪಾಟೀಲ್ ಅವರ ವಿರುದ್ಧ ಯತ್ನಾಳ್​ ವಾಗ್ದಾಳಿ ನಡೆಸಿದ್ದರು. “ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ” ಎಂದು ಸವಾಲು ಎಸೆದಿದ್ದರು.*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *