
ಸಕಲೇಶಪುರ : ಆನೆ -ಮಾನವ ಸಂಘರ್ಷದಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ, ಆದರೂ ಜೀವ ಹಾನಿ ಸಂಭವಿಸುತ್ತಿರುವುದು ವಿಷಾದನೀಯ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಬೈಕೆರೆ ಗ್ರಾಮದಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ನಿಧನ ಹೊಂದಿದ ಷಣ್ಮುಖ ಅವರ ಮನೆಗಿಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಕೂಡಲೇ ಬಿಕ್ಕೋಡಿನಲ್ಲಿ ಆನೆ ಕಾರ್ಯಪಡೆಯ ಘಟಕ ಸ್ಥಾಪಿಸಿ ಸ್ಥಳೀಯರಿಗೆ ಆನೆಗಳ ಚಲನವಲನದ ಬಗ್ಗೆ ಸಕಾಲಿಕ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕರಾದ ಸಿಮೆಂಟ್ ಮಂಜು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಮತ್ತಿತರರಿದ್ದಾರೆ.
