ಯುದ್ಧ.. ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್​ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಸತತ 11ನೇ ರಾತ್ರಿಯೂ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸ್ಟೇಷನ್​ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತ ಪ್ರತಿದಾಳಿ ಕೂಡ ನಡೆಸಿದೆ. ಈಗ ಮತ್ತೊಂದು ಲೆವೆಲ್​ಗೆ ಪ್ರತೀಕಾರವನ್ನು ಕೊಂಡೊಯ್ಯಲು ಭಾರತ ಸರ್ಕಾರ ಮುಂದಾಗಿದೆ. ನಾಳೆ ದೇಶಾದ್ಯಂತ ಮಾಕ್ ಡ್ರಿಲ್‌ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಮಾಕ್​ ಡ್ರಿಲ್​ ಅಂದ್ರೆ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ.

ನಾಳೆ ಏನೆಲ್ಲ ನಡೆಯುತ್ತದೆ..?

ಯುದ್ಧ ನೋಡದ ಇಂದಿನ ಪೀಳಿಗೆಗೆ ಶತ್ರುಗಳಿಂದ ಸ್ವಯಂ ರಕ್ಷಣೆ ಸಂಬಂಧ ಕಾರ್ಯಕ್ರಮ ವಾಯುದಾಳಿ ಎಚ್ಚರಿಕೆ: ಸುಕ್ಷ್ಮ ಪ್ರದೇಶಗಳಲ್ಲಿ ಶತ್ರುಗಳಿಂದ ವಾಯು ದಾಳಿ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಯುದಾಳಿಯ ಸೈರನ್ ಮೊಳಗಿಸಿ ಮಾಹಿತಿ ನೀಡುವುದು.

ರಕ್ಷಣೆ ಕುರಿತು ತರಬೇತಿ: ಪ್ರತಿಕೂಲ ದಾಳಿ ವೇಳೆ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಇರುವ ಪೀಳಿಗೆ ಯುದ್ಧವನ್ನು ನೋಡಿಲ್ಲ. ಹೀಗಾಗಿ ಇದು ತುಂಬಾನೇ ಮುಖ್ಯವಾಗಿದೆ.

ವಿದ್ಯುತ್ ದೀಪ್ ಬಂದ್: ವಾಯುದಾಳಿ ಸಂದರ್ಭದಲ್ಲಿ ನಗರ ಮತ್ತು ಹಳ್ಳಿಗಳಲ್ಲಿ ವಿದ್ಯುತ್ ದೀಪ್ ಸಂಪೂರ್ಣ ಬಂದ್ ಆಗಿರಲಿದೆ. ರಾತ್ರಿ ವಾಹನ ಸಂಚಾರ ಸ್ಥಗಿತವಾಗಿರಲಿದೆ. ವೈರಿಗಳಿಗೆ ಜನಸಂಖ್ಯೆ ವಾಸಿಸುವ ಗುರುತು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಅಂತೆಯೇ 244 ಜಿಲ್ಲೆಗಳಲ್ಲಿ ವಿದ್ಯುತ್ ದೀಪ್ ಬಂದ್ ಆಗಲಿದೆ.

ಪ್ರಮುಖ ಸ್ಥಾವರಗಳ ಮರೆಮಾಚುವಿಕೆ: ದೇಶದ ಆಸ್ತಿ ಆಗಿರುವ ಪ್ರಮುಖ ಸ್ಥಾವರಗಳನ್ನು ಶತ್ರುಗಳಿಂದ ಬಚ್ಚಿಟ್ಟುಕೊಳ್ಳುವುದು ಮುಖ್ಯವಾಗಿದೆ. ಅವುಗಳ ಮೇಲೆ ದಾಳಿ ಆಗದಂತೆ ಮರೆಮಾಚಿಕೊಳ್ಳಬೇಕಾದ ಅಗತ್ಯ ಇರುತ್ತದೆ. ಹೀಗಾಗಿ ಈ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ

ರೆಸ್ಕ್ಯೂ ಆಪರೇಷನ್​ ಬಗ್ಗೆ ತರಬೇತಿ: ದುರ್ಗಮ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನು ಹೇಗೆ ರಕ್ಷಣೆ ಮಾಡಬೇಕು ಅನ್ನೋದ್ರ ಬಗ್ಗೆ ಅಣಕು ಕಾರ್ಯಾಚರಣೆ ನಡೆಸಲಾಗುತ್ತದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *