ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು ತಿಳಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದನ್ನು ಘೋಷಣೆ ಮಾಡಲು ನನಗೆ ತುಂಬಾ ಸಂತಸವಾಗುತ್ತಿದೆ. ಈ ಒಂದು ನಿರ್ಧಾರದಿಂದ ಎರಡು ದೇಶಗಳಿಗೂ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಡಿಜಿಎಂಒ ಮೊದಲು ಭಾರತವನ್ನು ಸಂಪರ್ಕಿಸಿ ಕದನ ವಿರಾಮಕ್ಕೆ ಮನವಿ ಮಾಡಿದ್ದರು. ಇದರ ನಂತರ ಎರಡು ದೇಶಗಳು ಯುದ್ಧ ವಿರಾಮಕ್ಕೆ ಘೋಷಣೆ ಮಾಡಿವೆ. ಇದು ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಘೋಷಣೆ ಮಾಡಲಾಗಿದೆ. ಉಳಿದ ಮಾಹಿತಿಯನ್ನು ಮೇ 12 ರಂದು ಹೇಳುತ್ತೇವೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಮಿಕ್ರಮ್ ಮಿಸ್ರಿ ಹೇಳಿದ್ದಾರೆ.

ಈ ಕದನ ವಿರಾಮವನ್ನು ಮುಂದುವರೆಸಿಕೊಂಡು ಹೋಗುವ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ಮಾಡಲಾಗುತ್ತದೆ. ಮೇ 12 ರಂದು ಮತ್ತೊಮ್ಮೆ ಡಿಜಿಎಂಒ ಅಧಿಕಾರಿಗಳು ಸಭೆ ನಡೆಸಿ ಮಹತ್ವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *