
ಸಕಲೇಶಪುರ: ಗ್ರಾಮ ಪಂಚಾಯಿತಿ ನೀರುಘಂಟಿಗಳ ನೌಕರರ ಸಂಘ (ರಿ.), ಸಕಲೇಶಪುರ ಇದರ ಉದ್ಘಾಟನಾ ಕಾರ್ಯಕ್ರಮವು ಬುಧವಾರದಂದು ಜರುಗಿತು.
ಈ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಂಗಾಧರ್ ಜಿ.ಡಿ., ಸಹಾಯಕ ನಿರ್ದೇಶಕರಾದ ಆದಿತ್ಯ ಹಾಗೂ ಹರೀಶ್ ಸರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಜು ಕೆ.ಎಸ್. ವಹಿಸಿದ್ದರು.
ಈ ಸಂದರ್ಭದಲ್ಲಿ 26 ಗ್ರಾಮ ಪಂಚಾಯಿತಿಗಳ ನೀರುಘಂಟಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
