
ಸಕಲೇಶಪುರ : ಬೀದಿ ನಾಯಿಗಳು ಬಾಲಕನೂರ್ವನಿಗೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿ ಇಂದು ರಾತ್ರಿ ನಡೆದಿದೆ.
ಬಡಾವಣೆಯ ಅಮಿದ್ ಎಂಬುವವರ ಮಗ ಶಾಹಿದ್ ಇಂದು ರಾತ್ರಿ ಸುಮಾರು 8 ಗಂಟೆಯ ಸಮಯದಲ್ಲಿ ಅಂಗಡಿಯಿಂದ ಸಾಮಾನು ತೆಗೆದುಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಬೀದಿಯಲ್ಲಿ ಇದ್ದ ನಾಯಿ ಬಾಲಕನ ಮೇಲೆ ಏಕಾಏಕಿ ದಾಳಿ ನಡೆಸಿ ಮುಖ, ಮತ್ತು ಕೈ ಕಾಲುಗಳಿಗೆ ಕಚ್ಚಿ ಗಾಯಗೊಳಿಸಿವೆ.
ಸರಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಬಡಾವಣೆಯ ಪ್ರತಿ ಬೀದಿಯಲ್ಲಿಯೂ 15 ರಿಂದ ಇಪ್ಪತ್ತಕ್ಕೂ ಹೆಚ್ಚು ಬೀದಿ ನಾಯಿಗಳು ಇದ್ದು ವೃದ್ದರು, ಹೆಂಗಸರು, ಮತ್ತು ಮಕ್ಕಳು ರಸ್ತೆಯಲ್ಲಿ ಸಂಚರಿಸುವುದು ಕಷ್ಟಕರವಾಗಿದ್ದು ಕೂಡಲೇ ಪುರಸಭೆಯವರು ಬೀದಿ ನಾಯಿಗಳನ್ನು ಹಿಡಿದು ಸ್ಥಳಾಂತರಿಸದಿದ್ದರೆ ಕುಡುಗರಹಳ್ಳಿ ಬಡಾವಣೆಯ ಜನರು ಪುರಸಭೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಪುರಸಭಾ ಸದಸ್ಯ ಸುಲೇಮಾನ್ ಪುರಸಭೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
