
ಸಕಲೇಶಪುರ : ಮಕ್ಕಳ ಸರ್ವಾಂಗೀಣ ಬೆಳವಣಿಗೆಯ ವ್ಯಕ್ತಿತ್ವ ವಿಕಾಸನದಲ್ಲಿ ಪಠ್ಯೇತರ ಚಟುವಟಿಕೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆ ಪೈಕಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಸ್ಥಾನವನ್ನು ಹೊಂದಿವೆ.
ಇವು ಮಕ್ಕಳ ಪಠ್ಯ ವಿಷಯಗಳ ಹೊರತಾಗಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಒಂದು ವೇದಿಕೆಯಾಗುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ, ಆತ್ಮವಿಶ್ವಾಸ, ಸಹಕಾರ ,ಶಿಸ್ತು, ಮುಂತಾದ ಸಾಮಾಜಿಕ ಕೌಶಲ್ಯಗಳು ಅಭಿವೃದ್ಧಿಯಾಗುತ್ತವೆ.
ಹಾಡು ನೃತ್ಯ, ನಾಟಕ, ಸಂಗೀತ, ಚಿತ್ರಕಲೆ, ಅಭಿನಯ, ಇತ್ಯಾದಿಗಳ ಮೂಲಕ ಮಕ್ಕಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಚ್ಚಾಗಿ ಸಂಸ್ಕೃತಿ ಪರಂಪರೆಗಳ ಬಗ್ಗೆ ಗೌರವ ಹೆಚ್ಚಾಗುತ್ತದೆ.
ಒಟ್ಟಾರೆಯಾಗಿ ಮಕ್ಕಳ ಶಿಕ್ಷಣದ ಒಟ್ಟು ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಮೌಲ್ಯ ಧಾರಿತ ಶಿಕ್ಷಣವನ್ನು ಸಾಂಸ್ಕೃತಿಕ ಕಾರ್ಯಕ್ರಮಗಳು ಒದಗಿಸುತ್ತವೆ.
ಗೀತಾ ಹೆಚ್ ಸಿ ಸಹ ಶಿಕ್ಷಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶುಕ್ರವಾರ ಸಂತೆ ಸಕಲೇಶಪುರ.