ಹಾಸನ : ಜಮ್ಮು ಮತ್ತು ಕಾಶ್ಮೀರ ಭಾರತಮಾತೆಯ ಸಿಂಧೂರ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಯಶಸ್ವಿ ಸೇನಾ ಕಾರ್ಯಾಚರಣೆ ಆಪರೇಷನ್ ಸಿಂಧೂರ್ ಬೆಂಬಲಿಸಿ ರಾಷ್ಟ್ರೀಯ ಭದ್ರತೆಗಾಗಿ ನಾಗರೀಕರು ಹಾಸನ ಜಿಲ್ಲೆ ವತಿಯಿಂದ ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಿಂದ ಹೇಮಾವತಿ ಪ್ರತಿಮೆ ವರೆಗೆ ಆಯೋಜಿಸಿದ್ದ ಬೃಹತ್ ತಿರಂಗಾ ಯಾತ್ರೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಮೆಂಟ್ ಮಂಜು ರವರು ಪಾಲ್ಗೊಂಡರು.

ತಿರಂಗಾ ಯಾತ್ರೆಯಲ್ಲಿ 1000 ಅಡಿ ಉದ್ದದ ತಿರಂಗಾ ಧ್ವಜವನ್ನು ಮೆರವಣಿಗೆ ಮಾಡಲಾಯಿತು.

ಯಾತ್ರೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ ಗೌಡ ರವರು, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ರವರು, ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ನಿವೃತ್ತ ಯೋಧರು, ವಿವಿಧ ಮಠಗಳ ಸ್ವಾಮೀಜಿಗಳು, ಹಲವು ಸಂಘಟನೆಗಳ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು, ದೇಶಭಕ್ತ ನಾಗರೀಕರು ಜೊತೆಗಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *