ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

ಸಕಲೇಶಪುರ:- ಇಲ್ಲಿನ ಜೆ.ಎಂ.ಎಫ್‌.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಕಳೆದ ಮೂರು ವರ್ಷದ ಹಿಂದೆ ಬೆಂಗಳೂರಿನಿಂದ ಸಕಲೇಶಪುರಕ್ಕೆ ವರ್ಗಾವಣೆಗೊಂಡಿದ್ದ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಧೀಶರಾದ ಶ್ರೀಮತಿ ಧನಲಕ್ಷ್ಮಿ ರವರಿಗೆ ಪುನಹ: ಬೆಂಗಳೂರಿಗೆ ವರ್ಗಾವಣೆಯಾಗಿದ್ದು, ಈ ಸಂದರ್ಭದಲ್ಲಿ ವಕೀಲರ ಸಂಘದ ವತಿಯಿಂದ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಕಳೆದು ಮೂರು ವರ್ಷಗಳ ಅವಧಿಯಲ್ಲಿ ನ್ಯಾಯಾಧೀಶರು ಸಕಲೇಶಪುರದಲ್ಲಿ ಕಕ್ಷಿದಾರರುಗಳಿಗೆ ಅತಿ ಶೀಘ್ರದಲ್ಲಿ ನ್ಯಾಯದಾನ ಒದಗಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಹೆಚ್ಚು ಯುವ ವಕೀಲರು ಮತ್ತು ಮಹಿಳಾ ವಕೀಲರುಗಳು ನ್ಯಾಯಾಧೀಶರಿಂದ ಸ್ಪೂರ್ತಿಯನ್ನು ಪಡೆದಿದ್ದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಮತ್ತು ಹಳ್ಳಿಗಳಿಂದ ನೊಂದು ಬಂದಂತಹ ಕಕ್ಷಿದಾರರಿಗೆ ರಾಜಿ ಸಂಧಾನದ ಮೂಲಕ ಅದಾಲತ್ ನಲ್ಲಿ ಸಾವಿರಾರು ಕೇಸುಗಳನ್ನು ಬಗೆಹರಿಸಿದ್ದಾರೆ.ಮತ್ತು ಇವರ ಕರ್ತವ್ಯದ ಸಮಯದಲ್ಲಿ ಅಂಗನವಾಡಿ ,ತಾಲ್ಲೂಕು ಪಂಚಾಯಿತಿ, ಶಾಲಾ ಕಾಲೇಜು, ಆಸ್ಪತ್ರೆಗಳು, ಬಂದಿಖಾನೆ, ಸಮಾಜ ಕಲ್ಯಾಣ ಇಲಾಖೆ, ಹಾಗೂ ಗ್ರಾಮ ಪಂಚಾಯಿತಿ, ಮುಂತಾದ ಕಡೆಗಳಲ್ಲಿ ಅತಿ ಹೆಚ್ಚು ಕಾನೂನು ಮಾಹಿತಿ ಶಿಬಿರಗಳನ್ನು ನಡೆಸಿಕೊಟ್ಟಿರುತ್ತಾರೆ.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಅಪರ ಸರ್ಕಾರಿ ವಕೀಲರುಗಳು, ಹಿರಿಯ ಮತ್ತು ಕಿರಿಯ ವಕೀಲರು ನ್ಯಾಯಾಂಗ ಇಲಾಖೆಯ ನೌಕರರು ಹಾಜರಿದ್ದರು .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *