ಸಕಲೇಶಪುರ:-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ಪತ್ಯುತ್ತರವಾಗಿ ಪಾಕಿಸ್ತಾನದ ವಿರುದ್ಧ ನಮ್ಮ ಹೆಮ್ಮೆಯ ಸೈನಿಕರು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕೈಗೊಂಡ ಯಶಸ್ವಿ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಸೈನಿಕರಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಸೈನಿಕರೊಂದಿಗೆ ನಾಗರಿಕರು ಕೂಡ ಬೆಂಬಲವಾಗಿದ್ದೇವೆ ಎನ್ನುವ ಮನೋಭಾವದಿಂದ ದೇಶದಾದ್ಯಂತ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಇದೇ ಶುಕ್ರವಾರ ಬೆಳಗ್ಗೆ 10 ಕ್ಕೆ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಮುಖ್ಯ ರಸ್ತೆ ಬಸವೇಶ್ವರ ಪುತ್ತಳಿ ಮಾರ್ಗವಾಗಿ, ಹಳೆ ಬಸ್ ನಿಲ್ದಾಣದವರೆಗೆ ಸುಮಾರು 300 ಮೀಟರ್ ಉದ್ದದ ತ್ರಿವರ್ಣ ಧ್ವಜವನ್ನು ಪ್ರದರ್ಶನ ಮಾಡುವುದರ ಮೂಲಕ ಪಟ್ಟಣದ ಮುಖ್ಯರಸ್ತೆಯಲ್ಲಿ ಬೃಹತ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಬೃಹತ್ ತಿರಂಗಾ ಯಾತ್ರೆಯಲ್ಲಿ ರಾಷ್ಟ್ರೀಯ ಭಾವನೆಯನ್ನು ಹೊಂದಿರುವ ತಾವುಗಳೆಲ್ಲರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಿರಂಗಾ ಯಾತ್ರೆಯನ್ನು ಯಶಸ್ವಿಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ.

ಕಾಮನಹಳ್ಳಿ ತೀರ್ಮಾನಂದ (ಕೀರ್ತಿ )ಬಿಜೆಪಿ ಮುಖಂಡರು ಹಾಗೂ ಸಮಾಜಸೇವಕರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *