ಬೇಲೂರು : ಮರು ಮೌಲ್ಯಮಾಪನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೇಲೂರು ತಾಲ್ಲೂಕಿನ ಪೂರ್ಣಪ್ರಜ್ಞಾ ಶಾಲೆಯ ಎಸ್. ಧೃವಶಿಕ್ಷಕರಾದ ಶ್ರೀ ಕೆ.ಪಿ ಶಿವಮೂರ್ತಿ ಮತ್ತು ಶ್ರೀಮತಿ ಗೀತಾ ಇವರ ಮಗ ಪೂರ್ಣಪ್ರಜ್ಞಾ ಶಾಲೆಯ ಎಸ್.ಧೃವ

ಇವರು 2024-25ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 624 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇದೇ ಶಾಲೆಯ ಹಂಸ ಇವರೊಂದಿಗೆ ಬೇಲೂರು ತಾಲ್ಲೂಕಿನ ಪ್ರಥಮ ಸ್ಥಾನವನ್ನು ಹಂಚಿಕೊಂಡಿರುತ್ತಾರೆ.

ಮೇ 2ರಂದು ಪ್ರಕಟವಾದ ಫಲಿತಾಂಶದಲ್ಲಿ 620 ಅಂಕಗಳನ್ನು ಗಳಿಸಿದ್ದ ಎಸ್ ಧೃವ ಇವರಿಗೆ ನಂತರ ಮರುಎಣಿಕೆಯಲ್ಲಿ 624 ಅಂಕಗಳು ಲಭ್ಯವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಇಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಜೇಗೌಡ ಇವರು ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಹರೀಶ್, ಅಧೀಕ್ಷಕರಾದ ಸಚ್ಚಿನ್, ಶಿಕ್ಷಣ ಸಂಯೋಜಕರಾದ ಉಮೇಶ್ ಮತ್ತು ಜಗದೀಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪೂರ್ಣಪ್ರಜ್ಞ ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ್ ಈ ಬಾರಿಯೂ ಸಹ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆಯುವ ಮೂಲಕ ಸಾಲಿಗೆ ಮತ್ತು ತಾಲೂಕಿಗೆ ಕೀರ್ತಿ ತಂದಿರುವಂತಹ ಧ್ರುವ ಅವರಿಗೆ ಆಡಳಿತ ಮಂಡಳಿಯ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ ಅಲ್ಲದೆ ನಮ್ಮ ಸಂಸ್ಥೆಯ ಸುಮಾರು 10 ವಿದ್ಯಾರ್ಥಿಗಳು ಮೌಲ್ಯಮಾಪನದಲ್ಲಿ 620 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದವರು ಈ ವಿದ್ಯಾರ್ಥಿಗಳ ಭವಿಷ್ಯ ಇನ್ನೂ ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *