
ಸಕಲೇಶಪುರ : ಜೀವನದಲ್ಲಿ ಜಿಗುಪ್ಸೆಗೊಂಡು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ವಿರಾಜಪೇಟೆ ಶಾಸಕ ಪೊನ್ನಣ್ಣನವರ ಆಪ್ತ ಕಾರ್ಯದರ್ಶಿಯಾಗಿರುವ ಮಹೇಂದ್ರ ರವರ ಪತ್ನಿ ಶೃತಿ(40) ಆತ್ಮಹತ್ಯೆಮಾಡಿಕೊಂಡ ಶಿಕ್ಷಕಿ.
ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ತಾ.ಪಂ ವಸತಿ ಗೃಹದಲ್ಲಿ ಶನಿವಾರ ಮುಂಜಾನೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಶಿಕ್ಷಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯುವ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ.
ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಮಾಡಿಕೊಳ್ಳುತ್ತಿರುವುದಾಗಿ ಬರೆದಿರುವ ಡೆತ್‌ನೋಟ್ ಪತ್ತೆಯಾಗಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಶವಸಂಸ್ಕಾರ ನೆಡಲಾಗಿದ್ದು ಬಾನುವಾರ ಸ್ವಗ್ರಾಮ ಆಲೂರು ತಾಲೂಕು ಗಂಜಿಗೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರ ಸಾವಿಗೆ ಸರಕಾರಿ ನೌಕರರ ಸಂಘ ಕಂಬಿನಿ ಮಿಡಿದಿದೆ.
ಶ್ರತಿ ಅವರ ನಿಧನಕ್ಕೆ ಮಾಜಿ ಸಚಿವ ಹೆಚ್.ಕೆ.ಕುಮಾರಸ್ಟಾಮಿ, ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ , ಶಾಸಕ ಸಿಮೆಂಟ್ ಮಂಜುನಾಥ್,ಸಂತಾಪ ಸೂಚಿಸಿದ್ದಾರೆ.
