ಕರ್ನಾಟಕ : ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿ ಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ನಿಗದಿತ ಅವಧಿಯಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪ್ರಕಟಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಮತ್ತು ಇತರರು ಸಲ್ಲಿಸಿದ ನ್ಯಾಯಾಂಗಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.

ಈ ವೇಳೆ ಸರ್ಕಾ ರದ ಪರ ಹಾಜರಾದ ಅಡ್ವ ಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ರಾಜ್ಯ ಚುನಾವಣಾ ಆಯೋಗಕ್ಕೆಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸ ಲಾತಿ ಪಟ್ಟಿ ಮೇ ಅಂತ್ಯದೊಳಗೆ ಒದಗಿಸ ಲಾಗುವುದೆಂದು ಭರವಸೆ ನೀಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *