ಸಕಲೇಶಪುರ : ತಾಲೂಕಿನ ಬಾಳ್ಳುಪೇಟೆ ಚಿನ್ನಹಳ್ಳಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಈ ರಸ್ತೆ ದುರಸ್ತಿಗೆ ಅನುದಾನ ನೀಡುವಂತೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರ ನೀಡುವ ಮೂಲಕ ಮನವಿ ಮಾಡಿದರು

ಕಳೆದ ಹಲವಾರು ವರ್ಷಗಳಿಂದ ಬಾಳ್ಳುಪೇಟೆ ಮಾರ್ಗವಾಗಿ ಹೋಗುವ ಚಿನ್ನಹಳ್ಳಿ ರಸ್ತೆ ವಾಹನ ಸಂಚಾರಕ್ಕೆ ಪೂರ್ಣವಾಗಿ ಹದಗೆಟ್ಟಿದ್ದು ಈ ರಸ್ತೆ ದುರಸ್ತಿಗೆ ಅನುದಾನ ನೀಡುವಂತೆ ಗುರುವಾರ ಸಕಲೇಶಪುರಕ್ಕೆ ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಲು ಬಂದಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರು ಮನವಿ ಮಾಡಿದರು

ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಪುನೀತ್ ಬನ್ನಹಳ್ಳಿ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *