
ಸಕಲೇಶಪುರ :- ತಾಲ್ಲೂಕಿನ ಹಾನುಬಾಳು ಹೋಬಳಿಯ ಆಗನಿ ಗ್ರಾಮದಕ್ಕೆ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೆ ಪ್ರತಿನಿತ್ಯ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಜನಪ್ರತಿನಿಧಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಈ ಗ್ರಾಮಕ್ಕೆ ಸರಿಯಾದ ರಸ್ತೆ ವ್ಯವಸ್ಥೆಯನ್ನು ಮಾಡಿ ಎಂದು ಆಶಾ ಅವರು ಒತ್ತಾಯಿಸುತ್ತಿದ್ದಾರೆ.
ಈ ಆಗನಿ ಗ್ರಾಮದಲ್ಲಿ ಸುಮಾರು 200 ಮನೆಗಳಿದ್ದು 350ಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಸೇರಿದಂತೆ ವೃದ್ದರು ಇದ್ದು ಈ ರಸ್ತೆಯಲ್ಲಿ ಎರಡರಿಂದ ಮೂರು ಕಿಲೋಮೀಟರ್ ನಡೆದುಕೊಂಡು ಹೋಗುವಂತ ಪರಿಸ್ಥಿತಿ ಇದೆ.
ಈ ಮಳೆಗಾಲದಲ್ಲಿ ಚರಂಡಿ ನೀರು ರಸ್ತೆ ಮೇಲೆ ಬಂದು ನೆಡೆದುಕೊಂಡು ಹೋಗಲು ಆಗದೆ ಪರಿಸ್ಥಿತಿ ಎದುರಾಗಿದೆ. ಇಷ್ಟು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ಇದುವರೆಗೂ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ದಯಮಾಡಿ ಶಾಸಕರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಮಕ್ಕೊಮ್ಮೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಡುವ ನಿಟ್ಟಿನಲ್ಲಿ ಮನಸು ಮಾಡಬೇಕು. ತುಂಬಾ ಕಷ್ಟದ ಜೀವನವನ್ನು ಈ ಗ್ರಾಮಸ್ಥರು ನಡೆಸುತ್ತಿದ್ದಾರೆ. ಎಂದು ಗ್ರಾಮದ ಆಶಾ ಈ ಮೂಲಕ ಒತ್ತಾಯಿಸುತ್ತಿದ್ದಾರೆ.
