ಸಕಲೇಶಪುರ :- ತಾಲೂಕಿನ ಹೆತ್ತೂರು ಹೋಬಳಿಯ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ 16ವಿದ್ಯಾರ್ಥಿಗಳಿಗೆ ಬೆಂಗಳೂರಿನ ತ್ರಿನೇತ್ರ ಫೌಂಡೇಶನ್ (ರಿ ) ವತಿಯಿಂದ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಂತರಾಷ್ಟ್ರೀಯ ವಾಸ್ತು ತಜ್ಞ ಜಯರಾಮ್” ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ.

ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇತರ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದೆ.ಎಂದರು

ಈ ಸಂದರ್ಭದಲ್ಲಿ ರಾಜೇಶ್ವರಿ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ನಿರಂಜನ್ ಬಾಬು ಗುರೂಜಿ, ಡಾಕ್ಟರ್ ಜಯರಾಮ್ ಬೆಂಗಳೂರು,ಸೋಮಶೇಖರ್ ಬೆಂಗಳೂರು, ಶಾಲ ಮುಖ್ಯೋಪಾಧ್ಯಾಯರಾದ ಜಿ.ಆರ್ ಸತೀಶ್, ಸಹ ಶಿಕ್ಷಕಿ ವಿ.ಕೆ ಜೋತಿಮಣಿ, ಹರೀಶ್ ಹಳ್ಳಿ ಗದ್ದೆ,ಅಡಿಗೆ ಸಿಬ್ಬಂದಿಯರಾದ ಸುಬ್ಬಲಕ್ಷ್ಮಿ, ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *