ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಮತ್ತು ಯಸಳೂರು ಹೋಬಳಿ ರೈತರಿಗೆ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜ ಪೂರೈಕೆ ಮತ್ತು ವಿತರಣೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ಕೇಶವಮೂರ್ತಿ ಹೇಳಿದ್ದಾರೆ.

2025-26 ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಹೆತ್ತೂರು ಮತ್ತು ಯಸಳೂರು ಹೋಬಳಿಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಈ ನಿಟ್ಟಿನಲ್ಲಿ ರೈತರಿಗೆ ಸಕಾಲಕ್ಕೆ ಕೃಷಿ ಇಲಾಖೆ ವತಿಯಿಂದ ರೈತ ಸಂಪರ್ಕ ಕೇಂದ್ರ ಹೆತ್ತೂರು ಮತ್ತು ಯಸಲೂರಿನಲ್ಲಿ ತುಂಗಾ , ಇಂಟನ್ ,ಆರ್.ಎನ್ ಆರ್, ತನು ,IR 64 ಸೇರಿದಂತೆ ಭತ್ತದ ವಿವಿಧ ತಳಿಗಳು ಲಭ್ಯವಿದೆ. ರೈತರು ಆಗಸ್ಟ್ 31 ನೇ ತಾರೀಕಿನ ವರೆಗೂ ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *