ಬೆಂಗಳೂರು : ಚಿನ್ನಸ್ವಾಮಿಯಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಇಂದು ಮಹತ್ವದ ಸಭೆ ನಡೆಸಿತು. ಈ ಸಭೆಯಲ್ಲಿ ಸರ್ಕಾರ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಅದರಲ್ಲಿ ಪ್ರಮುಖವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಎಸಿಪಿ ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರನ್ನ ಅಮಾನತು ಮಾಡಿ ಆದೇಶ ಮಾಡಿದೆ. ಜೊತೆಗೆ ಕಬ್ಬನ್ ​ಪಾರ್ಕ್ ಪೊಲೀಸ್ ಇನ್ಸ್​ಪೆಕ್ಟರ್, ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂನ ಇನ್​ಚಾರ್ಜ್​ ಇವರನ್ನು ತತ್ ಕ್ಷಣದಿಂದ ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಪಿಐ, ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್, ಬೆಂಗಳೂರು ನಗರದ ಕಮಿಷನರ್ ಆಫ್ ಪೊಲೀಸ್ ಅವರನ್ನೂ ಅಮಾನತುಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ. ಆ ಮೂಲಕ ನಿನ್ನೆಯ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಪೊಲೀಸ್ ಇಲಾಖೆಯನ್ನೇ ಸರ್ಕಾರ ಹೊಣೆ ಮಾಡಿದಂತಿದೆ. ಇದು ಹಲವು ಚರ್ಚೆಗಳಿಗೆ ಕಾರಣವಾಗಿದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *