
ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಎಐ-171 ವಿಮಾನ ಇಂದು (ಗುರುವಾರ) ಪತನಗೊಂಡಿದೆ. ವಿಮಾನದ ತುರ್ತು ನಿರ್ಗಮನ ಬಾಗಿಲು ಬಳಿಯ ಆಸನ ಸಂಖ್ಯೆ 11ಎರಲ್ಲಿ ಕುಳಿತಿದ್ದ ರಾಣಾ ಆನಂದಿಬೆನ್ ಎಂಬಾತ ಬದುಕುಳಿದಿದ್ದಾನೆ ಎಂದು ಅಹಮದಾಬಾದ್ ಪೊಲೀಸ್ ಕಮಿಷನರ್ ಜಿ.ಎಸ್. ಮಲಿಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಣಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು’ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ 25 ಮಂದಿಯ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹಾಗಾಗಿ ವಿಮಾನ ಅಪಘಾತದಲ್ಲಿ ಬದುಕುಳಿದಿರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.
