ಸಕಲೇಶಪುರ : ಫಾದರ್ಸ್ ಡೇ ಪ್ರಯುಕ್ತ ರೋಟರಿ ಇಂಗ್ಲಿಷ್ ನರ್ಸರಿ ಶಾಲೆಯಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಶಾಲೆಯ ಪ್ರಾಂಶುಪಾಲ ಸುಮಂತ್ ಭಾರ್ಗವ ಮಾತನಾಡಿ ನಮ್ಮ ನರ್ಸರಿ ಶಾಲೆಯು ಕಳೆದ 30 ವರ್ಷಗಳಿಂದ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಕಲಿಕೆಯ ಜೊತೆಗೆ ವಿವಿಧ ರೀತಿಯಲ್ಲಿ ಆಟೋಟ ಚಟುವಟಿಕೆಗಳನ್ನು ಮಾಡುತ್ತಾ ಬರುತ್ತಿದ್ದು ಇಂದು ವಿಶ್ವ ಅಪ್ಪಂದಿರ ದಿನಾಚರಣೆಯ ಅಂಗವಾಗಿ ಮಕ್ಕಳು ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಮಕ್ಕಳಿಗೂ ಕೂಡ ಶಾಲೆಯಲ್ಲಿ ತಮ್ಮ ಪೋಷಕರೊಂದಿಗೆ ಇಂತಹ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬರುತ್ತಿದ್ದೇವೆ.

ಅಪ್ಪ ಎಂದರೆ ಸಹನೆ, ಕರುಣೆ, ಪ್ರೀತಿ, ತ್ಯಾಗ ಎಲ್ಲವೂ ಮಕ್ಕಳ ಪಾಲಿಗೆ ಆಗಿದ್ದು ಇಂತಹ ಅಪ್ಪಂದಿರ ದಿನಾಚರಣೆಯನ್ನು ಮಕ್ಕಳು ಅವರ ಅಪ್ಪಂದಿರೊಂದಿಗೆ ಒಂದು ದಿನ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೋಷಕರು ಸಹ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ ಎಂದರು.

ವಿಶ್ವ ಅಪ್ಪಂದಿರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ತಮ್ಮ ತಮ್ಮ ಮಕ್ಕಳೊಂದಿಗೆ ಅಪ್ಪಂದಿರು ರಾಂಪ್ ವಾಕ್ ಹಾಗೂ ಅಂತಕ್ಷರಿ ಹಾಡುವ ಮೂಲಕ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಎಂಜಾಯ್ ಮಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರು ಉತ್ತಮ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ನಡೆಸಿಕೊಟ್ಟರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *