ಸಕಲೇಶಪುರ :- ಸ್ಥಳಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಬಂದು ಹೆತ್ತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಶ್ವತ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಕೊಡಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಕಲೇಶಪುರ ಘಟಕದ ವರಿಂದ ಇಂದು ಬೆಳಗ್ಗೆಯಿಂದ ಬೃಹತ್ ಮಟ್ಟದ ಪ್ರತಿಭಟನೆ ನಡೆಸಲಾಗುತ್ತಿದೆ.

ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು ಒಂದು ತಿಂಗಳಿಂದ ಅಂಬುಲೆನ್ಸ್ 108 ವಾಹನವನ್ನು ಬೇರೆ ಬೇರೆ ಕಾರಣವಡ್ಡಿ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಭಾಗಕ್ಕೆ ಶಾಶ್ವತವಾದ ಆಂಬುಲೆನ್ಸ್ ವ್ಯವಸ್ಥೆ ಬೇಕು. ಅದನ್ನು ಮಾಡಿಕೊಡಬೇಕು. ಈ ಸಮಸ್ಯೆ ಬಗ್ಗೆ ಸ್ಥಳಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಬಂದು ಸಮಸ್ಯೆ ಯನ್ನು ಶಾಶ್ವತ ಬಾಗಿ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಕೊಡುವವರೆಗೂ ಪ್ರತಿಭಟನೆ ಬಿಡುವುದಿಲ್ಲ ಎಂದು ತಾಲೂಕು ಕರವೇ ಅಧ್ಯಕ್ಷರಾದ ಗಗನ್ ಹಾಡ್ಲಳ್ಳಿ ಹೇಳಿದರು

ಈ ಸಂದರ್ಭದಲ್ಲಿ ತಾಲೂಕು ಕರವೇ ಉಪ ಅಧ್ಯಕ್ಷರಾದ ಮಧು, ಸಕಲೇಶಪುರ ಆಲೂರು ಉಸ್ತುವಾರಿ ರಘು ಪಾಳ್ಯ, ಸೇರಿದಂತೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *