ಆಲೂರು : ತಾಲೂಕಿನ ಯೋಜನಾಧಿಕಾರಿಯಾದ ರತ್ನಾಕರ ಕೊಠಾರಿ ಸರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತಾನಾಡಿ ಈ ಭೂಮಿಯಲ್ಲಿ ಪ್ರತಿಯೊಂದು ಜೀವಿ ಬದುಕಬೇಕಾದರೆ ಪರಿಶುದ್ಧವಾದ ಪರಿಸರ ಅವಶ್ಯಕತೆ ಇದೆ. ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥಕೋಸ್ಕರ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿದು ನಾಶವಾಗುತ್ತಿರುವ ಈ ದಿನಗಳಲ್ಲಿ ಪರಿಸರವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಆಗಿರುತ್ತದೆ, ಈ ಬಗ್ಗೆ ಮಕ್ಕಳು ಹೆಚ್ಚಿನ ಕಾಳಜಿಯನ್ನು ವಹಿಸಬೇಕು, ಪ್ರತಿಯೊಂದು ಮನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಗಿಡ ನಾಟಿ ಮಾಡಿ ಸ್ವಚ್ಛವಾದ ಪರಿಸರವನ್ನು ನಿರ್ಮಾಣ ಮಾಡಿದ್ದಲ್ಲಿ ಆರೋಗ್ಯವಾದ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ. ಪರಿಸರವನ್ನು ಮಾಲಿನ್ಯ ಮಾಡದೆ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪರಿಸರ ಸಂರಕ್ಷಣೆಗೆ ಪೂರಕವಾಗಿ ಹಲವಾರು ಕಾರ್ಯಕ್ರಮವನ್ನು ನಡೆಸುತ್ತಿದೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಸಾಲ ನೀಡಲು ಮಾತ್ರ ಇರುವ ಸಂಸ್ಥೆ ಅಲ್ಲ ಈ ಸಮಾಜದ ಸಮಗ್ರ ಅಭಿವೃದ್ಧಿಗೆ ಇರುವ ಸಂಸ್ಥೆ, ಅದಕ್ಕೆ ಪೂರಕವಾಗಿ ಹಲವಾರು ಕಾರ್ಯಕ್ರಮವನ್ನು ಪೂಜ್ಯರು ಕೊಟ್ಟಿದ್ದಾರೆ ಎಂದು ಮಾನ್ಯ ಯೋಜನಾಧಿಕಾರಿಗಳಾದ ರತ್ನಾಕರ ಕೊಠಾರಿ ಮಾಹಿತಿ ನೀಡಿದರು.

ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಮ್ಮ ರವರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಲವಾರು ಸಮಾಜಮುಖಿ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನೂ ಗಿಡ ನಾಡಿ ಮಾಡಿ ಪ್ರತಿದಿನ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ವಹಿಸಬೇಕು, ಈ ಬಗ್ಗೆ ಮಕ್ಕಳು ವಿಶೇಷ ಕಾಳಜಿಯನ್ನು ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ಹೀನಾ ಸರ್ ಒಕ್ಕೂಟ ಅಧ್ಯಕ್ಷರಾದ ರೂಪ, ಶಾಲಾ ಶಿಕ್ಷಕರು, ಕೃಷಿ ಮೇಲ್ವಿಚಾರಕ ವಿಘ್ನೇಶ್, ವಲಯ ಮೇಲ್ವಿಚಾರಕಿ ಶ್ರೀಮತಿ ಯಶೋದಾ, ಸೇವಾ ಪ್ರತಿನಿಧಿ ಶ್ರೀಮತಿ ಕಾವ್ಯ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಡಿ ಮಾಡಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *