ಆಲೂರು : ತಾಲೂಕು ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಿಗನಹಳ್ಳಿ ಗ್ರಾಮದಲ್ಲಿ ಮತ್ತು ಭೈರಾಪುರ ಪಂಚಾಯಿತಿ ಬ್ಯಾಬ ಗ್ರಾಮದಲ್ಲಿ ಅತಿಹೆಚ್ಚು ಮಳೆ ಹಾಗೂ ಬಿಳಿಸುಳಿ ರೋಗದಿಂದ ಹಾನಿಯಾಗಿರುವ ರೈತರ ಮೆಕ್ಕೆಜೋಳದ ಹೊಲಗಳಿಗೆ ಮಾನ್ಯ ವಿಪಕ್ಷ ನಾಯಕರಾದ ಆರ್ ಅಶೋಕ್ ಅವರೊಂದಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಲೂರು ತಾಲೂಕಿನ 930 ಹೆಕ್ಟೇರ್ ಮೆಕ್ಕೆಜೋಳ ಬಿಳಿಸುಳಿ ರೋಗದಿಂದ ನಾಶವಾಗಿದೆ.

ಈ ಸಂದರ್ಭದಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಮತ್ತು ಬೆಳೆ ಹಾನಿ ಕುರಿತು ವರದಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ರೈತರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *