
ಸಕಲೇಶಪುರ : ನಗರದ ರಾಘವೇಂದ್ರ ನಗರದಲ್ಲಿರುವ (ಬಾಳೆಗದ್ದೆ) ಹಾಸನ ಜಿಲ್ಲಾ ಬೆಳೆಗಾರರ ಸಂಘದ ಕಛೇರಿಗೆ ಮಾನ್ಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರೊಂದಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೇಟಿ ನೀಡಿ ಬೆಳೆಗಾರರ ಮನವಿ ಪತ್ರವನ್ನು ಸ್ವೀಕರಿಸಿದರು.
ನಂತರ ಬೆಳೆಗಾರರ ಸಮಸ್ಯೆಗಳ ಕುರಿತು ಈಗಾಗಲೇ ಹಲವು ಬಾರಿ ಸದನದಲ್ಲಿ ಪ್ರಸ್ತಾಪಿಸಿದ್ದು ಈ ಬಾರಿಯು ಸಹ ಸರ್ಕಾರದ ಗಮನ ಸೆಳೆಯುವ ಮೂಲಕ ಪರಿಹಾರ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ ರವರು, ಕಾಫಿ ಬೋರ್ಡ್ ಸದಸ್ಯರು, ಬೆಳೆಗಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



