ಬೇಲೂರು : ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ 2024-25 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದ ಬಿ. ಚಂದ್ರಯ್ಯ (PDO) ಆಡಳಿತ ಸೇವೆಯಲ್ಲಿ ಗುರುತಿಸಿ ಆಯ್ಕೆಯಾಗಿದರು.

ಇವರು ಅರೇಹಳ್ಳಿ ಮತ್ತು ನಾರ್ವೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಬಿ. ಚಂದ್ರಯ್ಯ ರವರಿಗೆ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ನೀಡಲಾಯಿತು .

ಕಾರ್ಯಕ್ರಮದ ಸಂದರ್ಭದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ, ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದ್ರಿ, ರಂಗಕರ್ಮಿ ಚಿತ್ರನಟ ಮುಖ್ಯಮಂತ್ರಿ ಚಂದ್ರು, ಕರ್ನಾಟಕ ಮೀಡಿಯಾ ಕ್ಲಬ್ ನ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಸಿಬ್ಬಂದಿ ವರ್ಗದವರು ಕುಟುಂಬಸ್ಥರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *