
ಹಾಸನ: ಮೈಗೂಡಿಸಿಕೊಂಡಿರುವ ದುರಭ್ಯಾಸಗಳನ್ನು ಬದಿಗಿಟ್ಟು ಒಳ್ಳೆಯ ಜೀವನ ಶೈಲಿಯನ್ನು ಬೆಳೆಸಿಕೊಂಡಲ್ಲಿ ಸದೃಢ ಆರೋಗ್ಯ ನಿರ್ಮಾಣ ಸಾಧ್ಯ ಹಾಗೂ ಪ್ರತಿನಿತ್ಯ ಕೆಲ ಸಮಯ ವಾಕ್ ಮಾಡುವುದರ ಮೂಲಕ ಹೃದಯವನ್ನು ಉತ್ತಮವಾಗಿಟ್ಟುಕೊಂಡು ಆರೋಗ್ಯ ಕಾಪಾಡೋಣ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.
ನಗರದ ಜಿಲ್ಲಾದಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ಹಾಸನ ನಗರದಲ್ಲಿ ಹೃದಯ ಸಂಭಂದಿ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಶುಕ್ರವಾರ ಬೆಳಿಗ್ಗೆ ಆಯೋಜಿಸಲಾಗಿದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ನಂತರ ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯಕರ ಜೀವನಕ್ಕೆ ಅನುಸರಿಸಬೇಕಾದ ಜೀವನ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಥಾ ಆಯೋಜಿಸಲಾಗಿದೆ. ಪ್ರತಿಯೊಬ್ಬರು ದುರಭ್ಯಾಸಗಳನ್ನು ಬದಿಗಿಟ್ಟು ಒಳ್ಳೆಯ ಜೀವನ ಶೈಲಿಯನ್ನು ಬೆಳೆಸಿಕೊಂಡಲ್ಲಿ ಸದೃಢ ಆರೋಗ್ಯ ನಿರ್ಮಾಣ ಸಾಧ್ಯ ಎಂದರು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ತಹಸೀಲ್ದಾರ್ ಗೀತಾ, ಜಿಲ್ಲಾ ಆರೋಗ್ಯಾಧಿಕಾರಿ ಅನೀಲ್ ಕುಮಾರ್, ಡಾ. ವಿಜಯ್, ವೈದ್ಯರಾದ ಡಾ. ಅಬ್ದೂಲ್ ಬಶೀರ್, ಡಾ. ದಿನೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಹೆಚ್. ರಮೇಶ್, ಕಾರ್ಯದರ್ಶಿ ಸಿ. ಶಿವಸ್ವಾಮಿ, ರವಿಕುಮಾರ್ ಬಲ್ಲೆನಹಳ್ಳಿ, ಜಿಲ್ಲಾ ಸಂಪೂಟ ಕಾರ್ಯದರ್ಶಿ ಹೆಚ್.ಆರ್. ಚಂದ್ರೇಗೌಡ, ಮಾಜಿ ಅಧ್ಯಕ್ಷ ಹೆಚ್.ಕೆ. ನಾಗೇಶ್, ಗಿರೀಗೌಡ, ಕಲಾವಿದ ಬಿ.ಟಿ. ಮಾನವ, ಸೇರಿದಂತೆ ನೂರಾರು ಸಂಖ್ಯೆಯ ಸಂಘ ಸಂಸ್ಥೆಗಳ ಮುಖಂಡರು ವಿದ್ಯಾರ್ಥಿಗಳು ಭಾಗವಹಿಸಿದ್ದರು.




