ಶಿವಮೊಗ್ಗ : ಇಂದು ಕೇಂದ್ರ ಸಚಿವರಾದ ಶ್ರೀ ನಿತಿನ್‌ ಗಡ್ಕರಿ ಅವರು ಹೊಳೆಬಾಗಿಲಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಸಂಪರ್ಕಿಸುವ ದೇಶದ ಎರಡನೇ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ ಆಗಿರುವ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆ ಮಾಡಿ, ನೂತನ ಸೇತುವೆಯಲ್ಲೇ ಸಂಚರಿಸಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಸಂಸದರಾದ ಬಿ. ವೈ. ರಾಘವೇಂದ್ರ, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *