ಸಕಲೇಶಪುರ : ಕರ್ನಾಟಕ ಪ್ರದೇಶ್ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಮಂಜುನಾಥ್ ಗೌಡ ರವರ ಆದೇಶದ ಮೇರೆಗೆ ಶನಿವಾರದಂದು ಪಟ್ಟಣದ ಮೈತ್ರಿ ಹೋಟೆಲ್ ನಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಣಿ ಸಭೆಯನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಸಂಘಟನೆ ಬಗ್ಗೆ ಹಾಗೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಯನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯವನ್ನು ಮಾಡಬೇಕು ಸಾರ್ವಜನಿಕವಾಗಿ ಯಾವುದೇ ಸಮಸ್ಯೆ ಇದ್ದರೂ ಕೂಡ ಪಕ್ಷಾತೀತವಾಗಿ ಸ್ಪಂದನೆ ಮಾಡಬೇಕೆಂದು ಮತ್ತು ಮುಂದಿನ ಚುನಾವಣೆಯ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಹೋಬಳಿ ಮಟ್ಟದಲ್ಲೂ ಕುರಿತು ಪಕ್ಷ ಸಂಘಟನೆ ಮಾಡಬೇಕೆಂದು ರಾಜ್ಯದ ಪದಾಧಿಕಾರಿಗಳಾದ ರಾಜ್ಯ ಉಪಾಧ್ಯಕ್ಷ ದಿವ್ಯ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಮತ್ತು ರಾಜ್ಯ ಕಾರ್ಯದರ್ಶಿ ಕುಮಾರ್ ಹಾಸನ ಜಿಲ್ಲಾ ಅಧ್ಯಕ್ಷರಾದ ರಂಜಿತ್ ಗೋರೂರ್ ಮಾಹಿತಿ ನೀಡಿದರು

ಈ ಸಂದರ್ಭದಲ್ಲಿ ಸಕಲೇಶಪುರ ಕಟ್ಟಾಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಧರ್ಮ ಎಚ್ .ಎಸ್, ಉಪಾಧ್ಯಕ್ಷರಾದ ಪುನೀತ್, ಸಕಲೇಶಪುರ ಬ್ಲಾಕ್ ಅಧ್ಯಕ್ಷರಾದ ಕಬೀರ್, ಆಲೂರು ಬ್ಲಾಕ್ ಅಧ್ಯಕ್ಷರಾದ ಚಂದ್ರು, ಭುವನಕ್ಷ ,ನದೀಮ್, ಸೇರಿದಂತೆ ಅನೇಕ ಯುವ ಕಾಂಗ್ರೆಸ್ ಮಿತ್ರರು ಈ ಸಂದರ್ಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *