ಹಾಸನ : ಕೃಷಿ ಕಾಲೇಜು ಕಾರೆಕೆರೆ ಹಾಸನ, ತಮ್ಮ “ RAWE READY” ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ 2025 -26 ಭಾಗವಾಗಿ ಗ್ರಾಮ ವಾಸ್ತವ್ಯಕ್ಕೆ ಸಂಬಂಧಿಸಿದ “ಕಲಿತು ಕಲಿಸೋಣ “ಎಂಬ ಪರಿಚಯಾತ್ಮಕ ಕಾರ್ಯಕ್ರಮವನ್ನು ದಿನಾಂಕ 21-7-2025 ರಂದು ಹಾಸನದ ಮಡೇನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಚಾಕನಹಳ್ಳಿ ಹಾಗೂ ಸಣ್ಣ ಚಾಕನಹಳ್ಳಿಯ ಗ್ರಾಮಸ್ಥರಿಗಾಗಿ ಯಶಸ್ವಿಯಾಗಿ ಆಯೋಜಿಸಲಾಗಿದ್ದು ,

ಕಾರೆಕೆರೆ ಕೃಷಿ ಕಾಲೇಜಿನ ಅಂತಿಮ ವರ್ಷದ B.Sc(hons) ಕೃಷಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು, ಊರಿನ ಮುಖಂಡರು, ಹಿರಿಯರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು ಕಾರ್ಯಕ್ರಮಕ್ಕೆ ಮೆರಗು ನೀಡಿದ್ದರು.

ದೊಡ್ಡಚಾಕನಹಳ್ಳಿ ಡೈರಿಯ ಪ್ರಾಂಗಣದಲ್ಲಿ ಎರಡು ಗ್ರಾಮದ ಮುಖ್ಯಸ್ಥರು ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ RAWE READY ಕಾರ್ಯಕ್ರಮವನ್ನು ಉದ್ದೇಶಿಸಿ ಮತ್ತು ಗ್ರಾಮ ವಾಸ್ತವ್ಯ ಅವಧಿಯಲ್ಲಿ ಕೈಗೊಳ್ಳುವ ಚಟುವಟಿಕೆಗಳ ಬಗ್ಗೆ ಗ್ರಾಮಸ್ಥರಿಗೆ ವಿವರವಾಗಿ ತಿಳಿಸಿ ಅವರ ಸಹಕಾರ ಕೋರಲಾಗಿತ್ತು.

ಉತ್ತಮ ಪ್ರತಿಕ್ರಿಯೆಯೊಂದಿಗೆ ಗ್ರಾಮದ ಸಂಪೂರ್ಣ ಸಹಕಾರವನ್ನು ಕೊಡುವುದಾಗಿ ತಿಳಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಆಶೀರ್ವದಿಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *