
ಕೆ.ಆಲದಹಳ್ಳಿ ಗ್ರಾಮದ ಜನತೆಗೆ ಕೃಷಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಗೃತಿ
ಹಾಸನ: ಹಾಸನ ತಾಲ್ಲೂಕಿನ ಕೆ, ಆಲದ ಹಳ್ಳಿಯಲ್ಲಿ ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಬಿಎಸ್ಸಿ(ಹಾನರ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು.
ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದು, ಗ್ರಾಮದ ಮಹಿಳೆಯರು, ಮಕ್ಕಳು ಹಾಗೂ ಹಿರಿಯನಾಗರೀಕರಿಗೆ ನೈರ್ಮಲ್ಯ ಹಾಗೂ ಆರೋಗ್ಯದ ಮಹತ್ವದ ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳು ಪ್ರಾತ್ಯಕ್ಷಕೆ ಮೂಲಕ ಗ್ರಾಮಸ್ಥರಿಗೆ ಜಾಗೃತಿ ನೀಡಿದರು.
ತ್ಯಾಜ್ಯ ವಿಲೇವಾರಿ, ಮಾನವ ಆರೋಗ್ಯ ಹಾಗೂ ಪಶು ಆರೋಗ್ಯದ ವಿಚಾರಗಳನ್ನು ಚರ್ಚಿಸಿದರು.ಅಂತಿಮವಾಗಿ ಈ ಕಾರ್ಯಕ್ರಮವು ಗ್ರಾಮದಲ್ಲಿ ಶುದ್ಧತೆಯ ಅರಿವು ಹೆಚ್ಚಿಸುವಲ್ಲಿ ದೊಡ್ಡ ಹೆಜ್ಜೆಯಾಗ್ರಾಮಸ್ಥರಿಂದ ಶ್ಲಾಘನೆಗೆ ಪಾತ್ರವಾಯಿತು.
