ಹಾಸನ: ಚನ್ನಂಗಿಹಳ್ಳಿ ದಲಿತ ಮಹಿಳೆಯರು ಮತ್ತು ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ದೌರ್ಜನ್ಯ ಎಸಗಿರುವವರನ್ನು ಬಂಧಿಸಿ, ದಲಿತರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಂಭಾಂಗಣದಲ್ಲಿ ಎಸ್.ಸಿ/ಎಸ್ ಟಿ ಕುಂದುಕೊರತೆ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಸಭೆಯನ್ನು ಬಹಿಷ್ಕರಿಸಿ ಜಿಲ್ಲಾ ಪಂಚಾಯತ್ ಮುಂಭಾಗ ದಲಿತ ಹಕ್ಕುಗಳ ಸಮಿತಿ-ಕರ್ನಾಟಕ (ಡಿಎಚ್‌ಎಸ್) ವತಿಯಿಂದ ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿಗಳು ಹಾಗು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ದಸಂಸ ಮುಖಂಡ ಮಂಜುನಾಥ್, ಚನ್ನಂಗಿಹಳ್ಳಿಯ ಚಿಕ್ಕಯ್ಯ, ಸ್ವಾಮಿ, ಶೇಖ‌ರ್ ರಾಜಮ್ಮ, ಕಿರಣಕುಮಾ‌ರ್ ಹಾಗು ನೊಂದ ದಲಿತರ ಜೊತೆಗೆ ಕುರುವಂಕ ಗ್ರಾಮಸ್ಥರು ಭಾಗವಹಿಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *