ಸಕಲೇಶಪುರ : ದಿನಾಂಕ:30:07:25 ರಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಹೆಚ್.ಎಂ. ವಿಶ್ವನಾಥ್ ರವರು, ಹಾನುಬಾಳು ಹೋಬಳಿ ಕೇಂದ್ರ ಸ್ಥಾನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿರುವ ಅವ್ಯವಸ್ಥೆಯ ಬಗ್ಗೆ ವಿಡಿಯೋ ಮುಖಾಂತರ ತಮ್ಮ ಅಸಮಧಾನ ಹೊರಹಾಕಿದ್ದರು.

ಈ ವಿಷಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು,ಮತ್ತು ಈ ಹೋರಾಟಕ್ಕೆ ಉತ್ತಮ ಪ್ರಶಂಸೆಯ ಪ್ರತಿಕ್ರಿಯೆ ಬಂದಿತ್ತು.

ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು, ಮಾನ್ಯ ಮಾಜಿ ಶಾಸಕರಿಗೆ ದೂರವಾಣಿ ಕರೆ ಮಾಡಿ ,ಆಗಿರುವ ಅವ್ಯವಸ್ಥೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಜೊತೆಗೆ ಈದಿನ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ,ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು ಖುದ್ದು ಬೇಟಿ ನೀಡಿ ವಾಸ್ತವ ಪರಿಸ್ಥಿತಿ ಗಮನಿಸಿ, ನಂತರ ಮಾಜಿ ಶಾಸಕರ ನಿವಾಸಕ್ಕೆ ತೆರಳಿ ಸಂಬಂಧ ಪಟ್ಟ ವಿಷಯದ ಬಗ್ಗೆ ಆಗಿರುವ ಅವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೇವೆ ನೀಡುವ ಬಗ್ಗೆ ಬರವಸೆ ನೀಡಿದ್ದಾರೆ.

ಈ ಹೋರಾಟದ ಪ್ರತಿಪಲಕ್ಕೆ ಕಾರಣಕರ್ತರಾದ ,ಮಾಜಿ ಶಾಸಕರಾದ ಹೆಚ್.ಎಂ. ವಿಶ್ವನಾಥ್ ರವರಿಗೆ, ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *