
ದರೋಡೆ! ಬೆಚ್ಚಿ ಬಿದ್ದ ಸ್ಥಳೀಯರು!ಅರೇಹಳ್ಳಿ: ಬೇಲೂರು ತಾಲೂಕಿನ ಗಡಿ ಭಾಗದ ಹಳ್ಳಿಗಳಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಸುದ್ದಿ ತಿಳಿದ ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಮಂಗಳವಾರ ತಾಲೂಕಿನ ಹೋಬಳಿಯ ಮುರೇಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿರುವ ಘಟನೆ ಬೆಳಕಿಗೆ ಬಂದಿದ್ದು ಗ್ರಾಮದ ಕೂಲಿ ಕಾರ್ಮಿಕರಾದ ದಿನೇಶ್. ಗಂಗರಾಜು. ಗುಲಾಬಿ. ಹಾಗೂ ರಾಜಮ್ಮ ಎಂಬುವವರ ನಾಲ್ಕು ಮನೆಗಳ ಹಿಂಬದಿಯ ಬಾಗಿಲುಗಳನ್ನು ಮುರಿದು ಅಪರಿಚಿತ ವ್ಯಕ್ತಿಗಳು ಮನೆಯ ಬೀರುವಿನಲ್ಲಿ ಇಡಲಾಗಿದ್ದ ಲಕ್ಷಾಂತರ ಮೌಲ್ಯದ ಹಣ ಓಲೆ ಉಂಗುರ ಕಾಲ್ ಚೈನ್ ಸೇರಿದಂತೆ ಇನ್ನಿತರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಆರೋಪಿಗಳ ಪತ್ತೆಗಾಗಿ ಅರೇಹಳ್ಳಿ ಪೋಲಿಸರು ಶ್ವಾನ ಹಾಗೂ ಬೆರಳಚ್ಚು ತಜ್ಞರೊಂದಿಗೆ ಗ್ರಾಮದಲ್ಲಿ ಶೋಧಕಾರ್ಯ ನಡೆಸಿದ್ದು ಘಟನೆಯ ಬಗ್ಗೆ ಯಾವುದೇ ಸುಳಿವು ಸಿಗದಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ!.
ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಅರೇಹಳ್ಳಿ ಪಿಎಸ್‌ಐ ಶೋಭಾ ಬರಮಣ್ಣ ರವರು ಬೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
