
ಸಕಲೇಶಪುರ : ತಾಲ್ಲೂಕಿನಲ್ಲಿ ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಗಸ್ಟ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು,
ಕಾರ್ಯಕ್ರಮದಲ್ಲಿ (1) ದೇಶ ಸೇವೆ, (2) ಸಮಾಜ ಸೇವೆ, (3) ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿದವರಿಗೆ (4) ಪತ್ರಿಕೋದ್ಯಮ, (5) ಕೃಷಿ, (6) ಶಿಕ್ಷಣ, (7) ಪೌರ ಕಾರ್ಮಿಕ ಕ್ಷೇತ್ರಗಳಲ್ಲಿ ಗಣನಿಯ ಸೇವೆ ಸಲ್ಲಿಸಿದವರಿಗೆ ಸ್ವಾತಂತ್ರ್ಯ ದಿನಾಚರಣೆಯಂದು ಸನ್ಮಾನ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ ವ್ಯಕ್ತಿಗಳು ದಿನಾಂಕ: 10.08.2025 ರೊಳಗಾಗಿ ಸಕಲೇಶಪುರ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ, ಸಕಲೇಶಪುರ ತಮ್ಮ ಗಣನಿಯ ಸೇವೆಗಳ ಸಂಕ್ಷಿಪ್ತ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆಯ ಅಧ್ಯಕ್ಷರಾದ ತಹಶೀಲ್ದಾರ್ ಸುಪ್ರಿತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದ್ದಾರೆ.
