
ಆಲೂರು : ನಾಗರೀಕರು ಹಾಗೂ ಪೊಲೀಸ್ ಇಲಾಖೆ ನಡುವಿನ ಅಂತರ, ವಿಶ್ವಾಸ ವನ್ನು ಹೆಚ್ಚಿಸಲು ಹಾಗೂ ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯಾಗಿಸಲು ಸರ್ಕಾರ ” ಮನೆ ಮನೆಗೆ ಪೊಲೀಸರು ” ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿದೆ ಎಂದು ಆಲೂರು ಪೊಲೀಸ್ ಇನ್ಸ್ ಫೆಕ್ಟರ್ ಮೋಹನ್ ರೆಡ್ಡಿ ತಿಳಿಸಿದರು.
ಪಾಳ್ಯ ಗ್ರಾಮದಲ್ಲಿ ಆಯೋಜಿಸಿದ್ದ ಮನೆ ಮನೆಗೆ ಪೊಲೀಸರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸರು ಜನರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಹಾಗೂ ಬೀಟ್ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಭೇಟಿ ಮಾಡಿ ಗ್ರಾಮಗಳಲ್ಲಿನ ಕಾನೂನು ಸಮಸ್ಯೆಗಳನ್ನು ಗಮನಿಸಿ ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿರುವ ಭಯ ಆತಂಕವನ್ನು ದೂರ ಮಾಡುವ ಸಲುವಾಗಿ ಮನೆ ಮನೆಗೆ ಪೊಲೀಸರು ಎಂಬ ಕಾರ್ಯಕ್ರಮವನ್ನು ಸರ್ಕಾರ ನಡೆಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಫೆಕ್ಟರ್ ಮೋಹನ್ ರೆಡ್ಡಿ, ಸಬ್ ಇನ್ಸ್ ಫೆಕ್ಟರ್ ಪ್ರವೀಣ್ ಕುಮಾರ್, ಎ ಎಸ್ ಐ ಚಂದ್ರಶೇಖರ್, ಪಾಳ್ಯ ಬೀಟ್ ಪೊಲೀಸ್ ಅಧಿಕಾರಿ ಯೋಗೇಶ್, ತಾಲೂಕು ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ ಎಸ್ ಮಂಜೇಗೌಡ ಸೇರಿದಂತೆ ಗ್ರಾಮಸ್ಥರು ಇದ್ದರು.
