ಹಾಸನ ಜಿಲ್ಲೆಯ ಹಲವೆಡೆ ಕಳೆದ 2 ಗಂಟೆಯಿಂದ ಭಾರೀ ಮಳೆಯಾಗಿದ್ದು, ಪರಿಣಾಮ ರಸ್ತೆ‌ಗಳೆಲ್ಲ ಕೆರೆಯಂತಾಗಿ ವಾಹನಗಳು ನೀರಲ್ಲಿ ಕೊಚ್ಚಿಕೊಂಡುಹೋದ ಘಟನೆಗಳು ನಡೆದಿವೆ. ಅಲ್ಲದೆ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕೂಡ ಪರದಾಡಿದ್ದಾರೆ. ಇನ್ನು ಕೆಲವು ಕಡೆ ಚರಂಡಿಗಳು ತುಂಬಿ ಹರಿಯುತ್ತಿದ್ದು, ಇದರಿಂದ ನಗರ ಪ್ರದೇಶದ ಸ್ಲಂಗಳಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಒಟ್ಟಿನಲ್ಲಿ ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಇಂದು ವರುಣನ ತಂಪೆರೆದಿದ್ದಾನೆ .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *