
ಸಕಲೇಶಪುರ : ತಾಲೂಕು ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ನಿರ್ಮಿಸಿರುವ ಡಿಜಿಟಲ್ ಗ್ರಂಥಾಲಯ ಕಟ್ಟಡ, ಆದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಹಾಗೂ ಕುಣಿಗನಹಳ್ಳಿ ಗ್ರಾಮದ ಸಾರ್ವಜನಿಕ ಶೌಚಾಲಯವನ್ನು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕರು,ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು,ಗ್ರಾಮದ ಹಿರಿಯ ಮುಖಂಡರುಗಳು ಸಾರ್ವಜನಿಕರು, ಎಲ್ಲಾ ಹಂತದ ಜನ ಪ್ರತಿನಿಧಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವರು, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.





