ಹೆತ್ತೂರು; ಕಾನೂನು ಅರಿವು ಉಪನ್ಯಾಸ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣದ ಮಹತ್ವ ಅಗತ್ಯ; ತಾಲೂಕು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ವಿ. ಅಭಿಮತ

ಹೆತ್ತೂರು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ಮತ್ತು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಸಕಲೇಶಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ವಿಚಾರ ಸಂಕೀರ್ಣವನ್ನು ಉದ್ಘಾಟಿಸಿದ ಸಕಲೇಶಪುರ ತಾಲ್ಲೂಕು ಜೆ ಎಮ್ ಎಫ್ ಸಿ ಹಿರಿಯ ನ್ಯಾಯಾಧೀಶರಾದ ಶ್ರೀ ಜಯಪ್ರಕಾಶ್ ವಿ. ಮಾತನಾಡಿದರು.

ಬಾಲಕಾರ್ಮಿಕ ನಿರ್ಮೂಲನೆ, ಮಕ್ಕಳ ಕಾನೂನು ಹಾಗೂ ವಿದ್ಯಾರ್ಥಿಗಳ ಕಾನೂನು ಶಿಕ್ಷಣದ ಅವಶ್ಯಕತೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯಿದೆ(ಪೋಕ್ಸೋ) ಕುರಿತು ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ವಾಣಿ ಬಿ.ಪಿ., ಉಪನ್ಯಾಸ ನೀಡಿದರೆ, ವಕೀಲರ ಸಂಘದ ಸಹ ಕಾರ್ಯದರ್ಶಿ ವಿನಯ್ ಬಾಲ ಕಾರ್ಮಿಕ ವಿರೋಧಿ ಕಾಯಿದೆಯ ಕುರಿತು ಉಪನ್ಯಾಸ ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕರಡಿಗಾಲ, ಯಸಳೂರು ಪೋಲಿಸ್ ಠಾಣಾಧಿಕಾರಿ ಕತೀಜಾ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಾಲೇಜು ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ‌ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಭಾಸ್ಕರ್ ಬಿ., ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕರಾದ ಮಂಜುಳ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಸಿದ್ದೇಶ್ ಸ್ವಾಗತಿಸಿ, ಇಂಗ್ಲಿಷ್ ಉಪನ್ಯಾಸಕಿ ರೂಪ ವಂದಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *