
ಬೆಂಗಳೂರು : ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿರೋದಕ್ಕೆ ಕಿಚ್ಚ ಸುದೀಪ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ನಾವು ತಲೆತಲಾಂತರದಿಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ ಎಂದಿದ್ದಾರೆ.
ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿರೋದಕ್ಕೆ ಕಿಚ್ಚ ಸುದೀಪ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ನಾವು ತಲೆತಲಾಂತರದಿಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ ಎಂದಿದ್ದಾರೆ
ವಿಷ್ಣು ಸಮಾಧಿಗಾಗಿ ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನ ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿ ಕೊಡಿ ಎಂದು ನಟ ಕಿಚ್ಚ ಸುದೀಪ್ ಮನವಿ ಮಾಡಿಕೊಂಡಿದ್ದಾರೆ.
